ಪ್ರಜ್ವಲ್ ಪ್ರಕರಣ ಎಲ್ಲಾ ಆಯಾಮದಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಕಾನೂನಾತ್ಮಕವಾಗಿ ಶರಣಾಗಿದ್ದಾನೆ. ಎಸ್ಐಟಿಯವರು ತನಿಖೆಯನ್ನು ಕ್ರಮಬದ್ಧವಾಗಿ ಮಾಡಬೇಕು ಎನ್ನುವುದು ರಾಜ್ಯದ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದರು.
ಈ ಪ್ರರಕಣದಲ್ಲಿ ರಾಜಕಾರಣವು ಬೆರೆತಿದ್ದು, ಕಾನೂನು ಪ್ರಕಾರ ಇಂತದ್ದನ್ನು ಪ್ರಚಾರ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಎಸ್ಐಟಿ ಈ ನಿಟ್ಟಿನಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಚಂದ್ರಶೇಖರ ಆತ್ಮಹತ್ಯೆ ಪ್ರಕರಣದ ಸಿಬಿಐ ವಹಿಸುವುದು ಸೂಕ್ತ. ಈ ಪ್ರಕರಣದಲ್ಲಿ ಬ್ಯಾಂಕ್ ಕೂಡ ಶಾಮೀಲಾಗಿದೆ. ಬ್ಯಾಂಕ್ ನ ನಿಯಮ ಪ್ರಕಾರ 10 ಕೋಟಿಗಿಂತ ಜಾಸ್ತಿ ವಹಿವಾಟುಗಳ ಕುರಿತು ಸಿಬಿಐ ತನಿಖೆ ನಡೆಯಬೇಕು. ಸಚಿವ ಬಿ.ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಇಡೀ ಸರ್ಕಾರದ ನೈತಿಕತೆ ಪ್ರಶ್ನೆ ಇದೆ. ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಯಾವ ನೈತಿಕತೆ ಬಗ್ಗೆ ಮಾತನಾಡಿದ್ದರು ಎಂದು ಪ್ರಶ್ನಿಸಿದ ಅವರು, ಅದೇ ನಾಯಕರು ಇವತ್ತು ಸಿಎಂ, ಡಿಸಿಎಂ ಆಗಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ಸರ್ಕಾರದ ನೈತಿಕತೆಯ ಪ್ರಶ್ನೆಯಿದೆ . ಪ್ರಾಮಾಣಿಕತೆ ಉಳಿಸಿಕೊಳ್ಳುತ್ತಾರೋ ಇಲ್ಲಾ ಮಂತ್ರಿಯನ್ನು ಉಳಿಸಿಕೊಳ್ಳುತ್ತಾರೋ ಅನ್ನುವ ಪ್ರಶ್ನೆ ಅವರ ಮೇಲೆ ಇದೆ ಎಂದರು.
Post a comment
Log in to write reviews