ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೂ.24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಜ್ವಲ್ ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಇಷ್ಟು ದಿನ ಎಸ್ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ಇಂದಿನಿಂದ ಪರಪ್ಪನ ಅಗ್ರಹಾರ ಸೇರಲಿದ್ದಾರೆ.
Post a comment
Log in to write reviews