ಲೋಕಸಭಾ ಚುನಾವಣೆ ಮತ ಎಣಿಕೆಗೆ ಪೂರ್ವ ಸಿದ್ಧತೆ: ಕಟ್ಟುನಿಟ್ಟಿನ ಸೂಚನೆ ನೀಡಿದ ಕಮಿಷನರ್
ಬೆಂಗಳೂರು: ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣೆಯ ಮತ ಎಣಿಕೆ ಸಂಬಂಧ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಇಂದು ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮತ ಎಣಿಕೆಯ ಜೂ.4 ರಂದು ಸೂಕ್ತ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.
ನಗರದಲ್ಲಿ ಮೂರು ಮತ ಎಣಿಕೆ ಕೇಂದ್ರಗಳು ಬರಲಿದೆ. ಆಯೋಗದ ಮಾರ್ಗಸೂಚಿ ಅನ್ವಯ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿ ಟಿವಿ ಹಾಗೂ ವೀಡಿಯೋಗ್ರಾಫಿ ವ್ಯವ್ಯಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಎಣಿಕೆ ಕೇಂದ್ರಗಳ ಬಳಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಸರಿಯಾಗಿ ಮಾಡಿರಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಇನ್ನಿತರೆ ಸೌಲಭ್ಯ ಸರಿಯಾಗಿ ಕಲ್ಪಿಸಬೇಕು. ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಿ ತರಬೇತಿ ನೀಡಲಾಗಿದೆ. ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ಕೂಡಾ ನಿಯೋಜಿಸಲಾಗಿದೆ. ಅಂಚೆ ಮತ ಪತ್ರ ಎಣಿಕೆ ಸರಿಯಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ವಿನೋತ್ ಪ್ರಿಯಾ, ಸ್ನೇಹಲ್, ದಯಾನಂದ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ನಗರ ಜಿಲ್ಲೆಯ 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್ ರೂಂ ಕೇಂದ್ರಗಳ ವಿವರ
1. ಬೆಂಗಳೂರು ಕೇಂದ್ರ: ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ, ಬೆಂಗಳೂರು.
2. ಬೆಂಗಳೂರು ಉತ್ತರ: ಸೆಂಟ್ ಜೋಸೆಫ್ ಕಾಲೇಜು, ಮಲ್ಯ ರಸ್ತೆ, ಬೆಂಗಳೂರು.
3. ಬೆಂಗಳೂರು ದಕ್ಷಿಣ: ಎಸ್ಎಸ್ಎಂಆರ್ ವಿ ಕಾಲೇಜು, 9ನೇ ಬ್ಲಾಕ್, ಜಯನಗರ, ಬೆಂಗಳೂರು.
Post a comment
Log in to write reviews