ಬೆಂಗಳೂರು: ಅಪ್ರಾಪ್ತರು ವಾಹನ ಚಲಾಯಿಸುವುದು ಅಪರಾಧ ವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವರ ಪಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ನಿಯಮದ ಪ್ರಕಾರ 18 ವರ್ಷ ಮೇಲ್ಪಟ್ಟವರು ಮಾತ್ರ ವಾಹನ ಚಲಾಯಿಸಬೇಕು. 'ನಮ್ಮ ಮಕ್ಕಳು ಹೆಚ್ಚು ಬುದ್ಧಿಶಾಲಿಗಳು' ಎಂದು ಭಾವಿಸಿ ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ಕೊಟ್ಟರೆ, ಪಾಲಕರೇ ಪಡಿಪಾಟಲು ಅನುಭವಿಸಬೇಕಾಗುತ್ತದೆ. ಇಂತಹ ಪ್ರಕರಣ ಕಂಡುಬಂದಲ್ಲಿ ಅವರಿಗೆ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಜಾಮೀನುರಹಿತ ಪ್ರಕರಣಗಳು ದಾಖಲಿಸಲಾಗುತ್ತದೆ ಎಂದರು.
ಮದ್ಯಪಾನ ಮಾಡಿ ವಾಹನ ಚಲಾಯಿಸಿ ನಗರ ಪೊಲೀಸ್ ಪ್ರಕರಣದಲ್ಲಿ ಅಪ್ರಾಪ್ತರು ಭಾಗಿಯಾದರೆ, ಅವರ ಪಾಲಕರಿಗೆ ಜೈಲು ಕಾದಿದೆ ಎಂದು ಎಚ್ಚರಿಕೆ ನೀಡುವ ಜೊತೆಗೆ ಚಾಲನೆ, ವೀಲಿಂಗ್ ಮತ್ತಿತರ ಎಚ್ಚರಿಕೆಯನ್ನು ನೀಡಿದರು. ಸಭೆಯಲ್ಲಿ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬ ಮತ್ತು ದಕ್ಷಿಣ ವಿಭಾಗದ ಸಂಚಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಮತ್ತಿತರು ಉಪಸ್ಥಿತರಿದ್ದರು.
Post a comment
Log in to write reviews