ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ತಿಂಗಳಾಂತ್ಯ ಹಾಗೂ ನವೆಂಬರ್ ಮೊದಲ ವಾರದಲ್ಲಿ ಸಾಲು ಸಾಲು ರಜೆಗಳಿದ್ದು, ತಮ್ಮ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಖಾಸಗಿ ಬಸ್ ಮಾಲೀಕರು ಟಿಕೆಟ್ ದರ ಹೆಚ್ಚಳದ ಚಿಂತನೆ ನಡೆಸಿದ್ದಾರೆ, ಆದ್ರೆ, ಇದೀಗ ಇದಕ್ಕೆ ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಆನ್ ಲೈನ್ ಮೂಲಕ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಾಸ್ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಸಾರಿಗೆ ಇಲಾಖೆ, ದೀಪಾವಳಿ ಹಬ್ಬದ ಆನ್ ಲೈನ್ ಮೂಲಕ ಪ್ರಯುಕ್ತ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನರಿಂದ ಸಾಮಾನ್ಯ ಟಿಕೆಟ್ ದರಕ್ಕಿಂತ ಹೆಚ್ಚು ಸಂಗ್ರಹಿಸಬಾರದು. ದುಪ್ಪಟ್ಟು ಹಣ ಸಂಗ್ರಹಿಸುವ ವಾಹನ ಮಾಲೀಕರ ಪರ್ಮಿಟ್ ಹಾಗೂ ನೋಂದಣಿ ಪತ್ರ ಅಮಾನತು ಮಾಡಲಾಗುವುದು ಎಂದು ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಚ್ಚರಿಸಿದೆ.
Post a comment
Log in to write reviews