ಜಾಕ್ಸ್ ಕಾಲಿಸ್ ಅವರು ಸೌತ್ ಆಫ್ರಿಕಾ ಪರ 165 ಟೆಸ್ಟ್ ಪಂದ್ಯಗಳನ್ನಾಡಿ ಒಟ್ಟು 291 ವಿಕೆಟ್ಗಳನ್ನು ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ರಬಾಡ ಯಶಸ್ವಿಯಾಗಿದ್ದಾರೆ.
ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 357 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 233 ರನ್ ಬಾರಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಸೌತ್ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 173 ರನ್ ಬಾರಿಸಿ ಡಿಕ್ಲೇರ್ ಘೋಷಿಸಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕುವ ಮೂಲಕ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ವಿಂಡೀಸ್ ಪಡೆ ಯಶಸ್ವಿಯಾಗಿದೆ.
ಟ್ರಿನಿಡಾಡ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ (Kagiso Rabada) ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಜಾಕ್ಸ್ ಕಾಲಿಸ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ವಿಂಡೀಸ್ ವಿರುದ್ಧದ ಈ ಪಂದ್ಯದಲ್ಲಿ 30 ಓವರ್ಗಳನ್ನು ಎಸೆದ ರಬಾಡ ಮೊದಲ ಇನಿಂಗ್ಸ್ನಲ್ಲಿ 3 ವಿಕೆಟ್ ಕಬಳಿಸಿದರೆ, ಎರಡನೇ ಇನಿಂಗ್ಸ್ನಲ್ಲಿ 1 ವಿಕೆಟ್ ಪಡೆದರು. ಈ ಮೂಲಕ 4 ವಿಕೆಟ್ ಉರುಳಿಸುವ ಮೂಲಕ ಟೆಸ್ಟ್ನಲ್ಲಿ ಸೌತ್ ಆಫ್ರಿಕಾ ಪರ ಅತೀ ಹೆಚ್ಚು ಪಡೆದ 6ನೇ ಬೌಲರ್ ಎನಿಸಿಕೊಂಡರು.
ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಜಾಕ್ಸ್ ಕಾಲಿಸ್ ಕಾಣಿಸಿಕೊಂಡಿದ್ದರು. ಸೌತ್ ಆಫ್ರಿಕಾ ಪರ 165 ಟೆಸ್ಟ್ ಪಂದ್ಯಗಳನ್ನಾಡಿರುವ ಜಾಕ್ಸ್ ಕಾಲಿಸ್ ಒಟ್ಟು 291 ವಿಕೆಟ್ಗಳನ್ನು ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ರಬಾಡ ಯಶಸ್ವಿಯಾಗಿದ್ದಾರೆ.
ಸೌತ್ ಆಫ್ರಿಕಾ ಪರ ಕೇವಲ 63 ಟೆಸ್ಟ್ ಪಂದ್ಯಗಳನ್ನಾಡಿರುವ ಕಗಿಸೊ ರಬಾಡ ಈವರೆಗೆ 294 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಜಿ ವೇಗಿ ಡೇಲ್ ಸ್ಟೇನ್. ಸೌತ್ ಆಫ್ರಿಕಾ ಪರ ಕೇವಲ 93 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಟೇನ್ 439 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸದ್ಯ 294 ವಿಕೆಟ್ಗಳನ್ನು ಪಡೆದಿರುವ 29 ವರ್ಷದ ರಬಾಡ ಸ್ಟೇನ್ ಹೆಸರಿನಲ್ಲಿರುವ ಐತಿಹಾಸಿಕ ದಾಖಲೆಯನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.
Post a comment
Log in to write reviews