ನವದೆಹಲಿ: ಲೋಕ ಸಭಾ ವಿಪಕ್ಷ ಸ್ಥಾನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭಾ ಚುನಾವಣೆ ನಡೆದು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಚಿಸಿದೆ. ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ವಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಹಾಗೆಯೇ ವಿಪಕ್ಷ ನಾಯಕನ ಸ್ಥಾನದ ಬಗ್ಗೆ ಯೋಚಿಸಲು ನನಗೆ ಸ್ವಲ್ಪ ಕಾಲಾವಕಾಶ ಬೇಕು ಎಂದು ರಾಹುಲ್ ಗಾಂಧಿ ಕೇಳಿದ್ದರು. ಆದರೆ ಈಗ ರಾಹುಲ್ ಈ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ.
ದಶಕದ ಬಳಿಕ ಕಾಂಗ್ರೆಸ್ ಲೋಕಸಭೆಯಲ್ಲಿ ವಿಪಕ್ಷದ ಸ್ಥಾನ ಪಡೆದಿದೆ. ಹೀಗಾಗಿ ಉತ್ತಮ ನಾಯಕನನ್ನು ವಿಪಕ್ಷ ನಾಯಕರನ್ನಾಗಿ ಮಾಡಲು ಕಾಂಗ್ರೆಸ್ ಮುಂದಾಗಿದೆ. ರಾಹುಲ್ ಗಾಂಧಿ ಅವರು ಒಲ್ಲೆ ಎಂದ ಕಾರಣದಿಂದ ಮೂವರು ಹಿರಿಯ ನಾಯಕರಾದ ಕುಮಾರಿ ಸೆಲ್ಜಾ, ಗೌರವ್ ಗೊಗೊಯ್ ಮತ್ತು ಮನೀಶ್ ತಿವಾರಿ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Post a comment
Log in to write reviews