ಬೆಂಗಳೂರು: ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ರಾಮನಗರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕೋಲಾರ, ಕೊಡಗು, ಚಿತ್ರದುರ್ಗ, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು ಹಾಗು ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ವಾತಾವರಣ ಹಾಗೂ ಬಿಸಿಲು ಇದ್ದು, 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನಲಾಗಿದೆ.
Post a comment
Log in to write reviews