ಬೆಂಗಳೂರು: ರಾಜ್ಯದಲ್ಲಿ ಕೆಲವೇ ದಿನಗಳು ಮಾತ್ರ ಮುಂಗಾರು ಮಳೆ ಕೊನೆಗೊಳ್ಳಲು ಬಾಕಿ ಇದ್ದು, 9 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಬರಲಿದೆ. ಬಾಗಲಕೋಟೆ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು ಹಾಗೂ ತುಮಕೂರಿನಲ್ಲಿ ಗುಡುಗುಸಹಿತ ಸಾಧಾರಣ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೆಪ್ಟಂಬರ್ 28ರಿಂದ ರಾಜ್ಯಾದ್ಯಂತ ಮಳೆ ಕಡಿಮೆಯಾಗಲಿದೆ ಎಂದು ಇಲಾಖೆ ಹೇಳಿದೆ. ಚಿಕ್ಕಮಗಳೂರಿನ ಮೂಡಿಗೆರೆ, ದಕ್ಷಿಣ ಕನ್ನಡದ ಮಂಗಳೂರು, ಯಾದಗಿರಿ, ಕಲಬುರಗಿ ಸೇರಿ ರಾಜ್ಯದ ಕೆಲವೆಡೆ ಬುಧವಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Post a comment
Log in to write reviews