Samayanews.

Samayanews.

2024-12-24 12:31:17

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಊಟದ ವೇಳೆ ರ್‍ಯಾಟ್ ಪಾಯ್ಸನ್ ಸ್ಪ್ರೇ :19 ವಿದ್ಯಾರ್ಥಿಗಳು ಅಸ್ವಸ್ಥ

 

ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸ್ಪ್ರೇ ಮಾಡಿದ್ದರ ಪರಿಣಾಮ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಹಾಸ್ಟೆಲ್‌ನಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿಗಳು ರಾತ್ರಿ 8 ಗಂಟೆ ಸುಮಾರಿಗೆ ಊಟ ಮಾಡಲು ಬಂದಿದ್ದರು. ಹಾಸ್ಟೆಲ್‌ನಲ್ಲಿದ್ದ ನೆಲಮಹಡಿಯಲ್ಲಿರುವ ಜನರೇಟರ್​ಗಳಿಗೆ ಇಲಿಗಳಿಂದ ಹಾನಿಯಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹಾಸ್ಟೆಲ್​ ಸಿಬ್ಬಂದಿ ಇಲಿ ಪಾಷಾಣ ಸ್ಪ್ರೇ ಮಾಡುತ್ತಿದ್ದರು. ಆದರೆ ಏನೂ ಆಗಲಾರದು ಎಂದು ಊಟ ಮುಗಿಸಿ ಹೋಗಿದ್ದ 19 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ತಕ್ಷಣವೇ ಎಚ್ಚೆತ್ತ ಹಾಸ್ಟೆಲ್​ ಸಿಬ್ಬಂದಿ ಹತ್ತಿರದ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ನಿರ್ಲಕ್ಷ್ಯ ವಹಿಸಿದ ಆರೋಪದಡಿ ಹಾಸ್ಟೆಲ್​ ಸಿಬ್ಬಂದಿ ಮಂಜೇಗೌಡ ಹಾಗೂ ವ್ಯವಸ್ಥಾಪಕ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

img
Author

Post a comment

No Reviews