ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 26ರಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ , ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 26 ಮತ್ತು 27ರಂದು ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಗುರುವಾರ ರಾಜ್ಯಾದ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಉತ್ತರ ಕನ್ನಡ ಜಿಲ್ಲೆಯ ಕ್ಯಸಲ್‌ರಾಕ್‌ನಲ್ಲಿ 18 ಸೆಂ.ಮೀ. ಉಡುಪಿ ಜಿಲ್ಲೆಯ ಸಿದ್ಧಾಪುರದಲ್ಲಿ 17 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ 14 ಸೆಂ.ಮೀ.ಮ ಜಿಲ್ಲೆಯ ಕೊಟ್ಟಿಗೆಯಾರದಲ್ಲಿ 13 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆ, ಕೊಡಗು ಜಿಲ್ಲೆಯ ಸೋಮವಾರಪೇಟೆ, ಭಾಗಮಂಡಲ, ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ ತಲಾ 11 ಸೆಂ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.
Post a comment
Log in to write reviews