ಸ್ವಲ್ಪ ನಿರ್ಲಕ್ಷಿಸಿದ್ದರು ರೇಣುಕಾ ಹತ್ಯೆ ಕೇಸ್ ಬೇರೆಯೇ ಆಗುತ್ತಿತ್ತು-ಪೊಲೀಸ್ ಆಯುಕ್ತ ಬಿ.ದಯಾನಂದ್
ಬೆಂಗಳೂರು: ಕೊಲೆ ಆರೋಪಿಗಳಾದ ದರ್ಶನ್ & ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದೇವೆ. ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದರೂ ಪ್ರಕರಣ ಬೇರೆಯೇ ಆಗಿರುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಅವರು, ಪ್ರಕರಣ ಗಂಭೀರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿ ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತನಿಖೆ ನಡೆಯುತ್ತಿದೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು.
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ಉತ್ತರಿಸಿದ ಅವರು, ಇದೆಲ್ಲ ತನಿಖೆಯ ಭಾಗ, ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಆಗಬೇಕಿದೆ. ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು.
Post a comment
Log in to write reviews