ಕರ್ನಾಟಕ
ರೇಣುಕಾಸ್ವಾಮಿ ಕೊಲೆ ಪ್ರಕರಣ – ತುಮಕೂರು ಜೈಲಿನಿಂದ ಬಿಡುಗಡೆಯಾದ ಮೂವರು ಆರೋಪಿಗಳು
ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಸೆ.23 ರಂದು ಮೂವರು ಆರೋಪಿಗಳಾದ ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್ಗೆ 57ನೇ ಸಿಸಿಹೆಚ್ ಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೋರ್ಟ್ 2 ಲಕ್ಷ ರೂ. ಹಣ ಕೇಳಿದ್ದರು. ಆದರೆ ಜಾಮೀನು ಶ್ಯೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು ಪರದಾಡುತ್ತಿದ್ದರು.
ಶ್ಯೂರಿಟಿದಾರರು ಸಿಗದೇ ಸತತ 9 ದಿನಗಳಿಂದ ಪರದಾಟ ನಡೆಸುತ್ತಿದ್ದ ಕುಟುಂಬಸ್ಥರಿಗೆ ಮಂಗಳವಾರ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡಿದೆ. ತುಮಕೂರು ಜೈಲಾಧಿಕಾರಿಗಳಿಗೆ ಜಮೀನು ಆದೇಶದ ಪ್ರತಿ ಮೇಲ್ ಮೂಲಕ ಮಂಗಳವಾರ ರಾತ್ರಿ ತಲುಪಿದ್ದು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನಿನ ಮೇಲೆ ಬುಧವಾರ ಬಿಡುಗಡೆಯಾಗಿದ್ದಾರೆ ಎನ್ನಲಾಗಿದೆ.
Post a comment
Log in to write reviews