ಬೆಂಗಳೂರು: ಸಂಭವಾಮಿ ಯುಗೇ ಯುಗೇ ಚಿತ್ರದ ಪ್ರಚಾರ ಮೈಸೂರಲ್ಲಿ ನಡೆದಿದ್ದು ಜೂ. 21ಕ್ಕೆ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ.
ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಜಯ್ ಶೆಟ್ಟಿ, ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದ ಪ್ರಚಾರಕ್ಕಾಗಿ ತಂಡ ಮೈಸೂರಿಗೆ ಭೇಟಿ ಕೊಟ್ಟ ತಂಡ ಮಾಧ್ಯಮಗಳ ಜೊತೆ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ ಮಾತನಾಡಿ, ಕಳೆದ ಹತ್ತು ವರ್ಷದಿಂದ ಚಿತ್ರರಂಗದಲ್ಲಿದ್ದು, ಸಾಮಾಜಿಕ ವಿಚಾರ ಇಟ್ಟುಕೊಂಡು ಈ ಚಿತ್ರ ಮಾಡಲಾಗಿದೆ. ಕುಟುಂಬದವರು ನೋಡುವಂತ ವಿಭಿನ್ನ ಕಥಾಹಂದರ ಇರುವ ಚಿತ್ರದಲ್ಲಿ ಕೃಷ್ಣನ ಪಾತ್ರ ಹಾಗೂ ಅರ್ಜುನನನ್ನು ಹೋಲುವ ಪಾತ್ರಗಳಿದೆ. ಮಂಡ್ಯ, ಚನ್ನಪಟ್ಟಣ, ರಾಮನಗರ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದ ಟೀಸರ್, ಹಾಡುಗಳು ಈಗಾಗಲೇ ವೈರಲ್ ಆಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡುತ್ತಿದ್ದೇವೆ ಎಂದರು.
ನಾಯಕ ಜಯ್‌ಶೆಟ್ಟಿ ಮಾತನಾಡಿ, ಈ ಹಿಂದೆ 1975 ಎಂಬ ಚಿತ್ರದಲ್ಲಿ ಅಭಿನಯಿಸಿದ್ದೆ. ಕೃಷಿ ಮತ್ತು ರೈತರ ಮೇಲೆ ಮಾಡಿದ ಚಿತ್ರವಿದು. ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಮುಂದೇನಾಗುತ್ತದೆ ಎನ್ನುವುದೇ ಈ ಚಿತ್ರದ ತಿರುಳು ಎಂದರು.
ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಪೂರನ್ ಶೆಟ್ಟಿಗಾರ್ ಅವರ ಸಂಗೀತ ಸಂಯೋಜನೆ, ರಾಜು ಹೆಮ್ಮಿಗೆಪುರ ಅವರ ಛಾಯಾಗ್ರಹಣವಿದೆ. ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖ ಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದೆ.
Post a comment
Log in to write reviews