ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.3 ಕೊನೆಯ ದಿನಾಂಕವಾಗಿರುವುದರಿಂದ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಜೂ.2ರಂದು ಸಭೆ ನಡೆಯಲಿದೆ.
ಜೂನ್ 2 ರಂದು ನಡೆಯುವ ಸಭೆಯಲ್ಲಿ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ. ಸದ್ಯ ಪಕ್ಷದಿಂದ ನಾಲ್ವರು ಆಕಾಂಕ್ಷಿಗಳಿದ್ದು, ವಿಧಾನಸಭೆ ಸದಸ್ಯರ ಬಲದ ಆಧಾರದ ಮೇಲೆ ಒಬ್ಬರನ್ನು ಆಯ್ಕೆ ಮಾಡಲು ಅವಕಾಶವಿದೆ. ಹಾಗಾಗಿ ಜೂನ್ 2ರಂದು ಒಬ್ಬ ಅಭ್ಯರ್ಥಿಗೆ ಬಿ ಫಾರಂ ನೀಡಲಾಗುತ್ತದೆ. ಸದ್ಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಟಿ.ಎನ್.ಜವರಾಯೇಗೌಡ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮರು ಸ್ಪರ್ಧೆಗೆ ಒಲವು ತೋರಿದ್ದಾರೆ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿಯವರೂ ಆಕಾಂಕ್ಷಿಯಾಗಿದ್ದು, ಜತೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್‌ಗೌಡ ಹೆಸರು ಚಾಲ್ತಿಯಲ್ಲಿದೆ.
Post a comment
Log in to write reviews