ಶರಣ್ ಅಭಿನಯದ ಛೂ ಮಂತರ್ ಸಿನಿಮಾ ಈ ಹಿಂದೆ ಮೇ 10 ಕ್ಕೆ ರಿಲೀಸ್ ಆಗಲಿದೆ ಎಂದು ಚಿತ್ರತಂಡ ತಿಳಿಸಿತ್ತು, ಆದರೆ ಈಗ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ.
ಈ ಚಿತ್ರವನ್ನು ತರಣ್ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಜೊತೆಯಾಗಿ ನಿರ್ಮಿಸಲಿದ್ದಾರೆ, ಹಾಗೆಯೇ ಈ ಸಿನಿಮಾವನ್ನು ಕರ್ವ ಸಿನಿಮಾ ಖ್ಯಾತಿಯ ನವನೀತ್ ನಿರ್ದೇಶಿಸಿದ್ದು, ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಿದ್ದಾರೆ.
ಈ ಸಿನಿಮಾ ಈಗಾಗಲೇ ತನ್ನ ಟೀಸರ್ ಹಾಗೂ ಸಾಂಗ್‌ಗಳಿಂದ ಎಲ್ಲೆಡೆ ಸಖತ್ ಹೈಪ್ ಕ್ರಿಯೇಟ್ ಮಾಡಿದ್ದು, ಸಿನಿಮಾದ ಹೊಸ ಬಿಡುಗಡೆ ದಿನಾಂಕ ಯಾವಾಗ ಎಂದು ಕಾದು ನೋಡಬೇಕಿದೆ.
Post a comment
Log in to write reviews