ಬೆಂಗಳೂರು : ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಇಂದು ಡಿ ರಾಜ ಭವನಕ್ಕೆ ಮುತ್ತಿಗೆ ಹಾಕಲಾಯಿತು
ಡಿ ಕೆ ಶಿ ಅವರ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಿ ಬಿಜೆಪಿ ವಿರುದ್ಧ ಘೋ಼ಷಣೆ ಕೂಗುತ್ತ ಚಳುವಳಿಯನ್ನು ಮಾಡಲಾಯಿತು
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಇವತ್ತು ನಾವು ರಾಜ್ಯಪಾಲರನ್ನು,ಭೇಟಿ ಮಾಡಲು ಅನುಮತಿಯನ್ನು ಕೇಳಲು ಬಯಸುತ್ತೇನೆ,ಸಿದ್ದರಾಮಯ್ಯ ಮುಡಾ ಹಗರಕ್ಕೆ ಸಂಬದ್ದಿಸಿ ಈ ಚಲುವಳಿಯನ್ನು ಹಮ್ಮಿಕೊಂಡಿಲ್ಲ, ಗೌವನರ್ ಇಲಾಕೆ ಒಂದು ಪಕ್ಷದ ಕಚೇರಿಯಾಗಿ ಪರಿವರ್ತನೆ ಆಗಬಾರದು ಇದು ಸಂವಿಧಾನದ ಪೀಠ, ಹಾಗಗಿ ಈ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಡಿ.ಸುಧಾಕರ್, ಹೆಚ್.ಕೆ. ಪಾಟೀಲ್, ಬೋಸರಾಜು, ಶರಣಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್, ಈಶ್ವರ್ ಖಂಡ್ರೆ, ವೆಂಕಟೇಶ್, ಎಸ್.ಎಸ್ ಮಲ್ಲಿಕಾರ್ಜುನ್ ದಿನೇಶ್ ಗುಂಡೂರಾವ್, ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ನಯನ ಮೋಟಮ್ಮ, ಕಂಪ್ಲಿ ಗಣೇಶ್, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್, ಸುಧಾಮ್ ದಾಸ್, ಐವಾನ್ ಡಿಸೋಜ, ಸಂಸದರಾದ ಶ್ರೇಯಸ್ ಪಟೇಲ್, ಹಿರಿಯ ಮುಖಂಡರಾದ ವೀರಪ್ಪ ಮೊಯ್ಲಿ, ಎಂ.ಆರ್ ಸೀತಾರಾಮ್, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Post a comment
Log in to write reviews