ಸೋದರನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ 12 ವರ್ಷದ ಬಾಲಕಿಯ ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಬಾಂಬೆ ಹೈಕೋರ್ಟ್‌ನ ರಜಾ ಕಾಲದ ಪೀಠದ ನ್ಯಾಯಾಧೀಶರಾದ ಸಂದೀಪ್ ಮರ್ನೆ ಹಾಗೂ ನೀಲಾ ಗೋಖಲೆ ಅವರು ವೈದ್ಯಕೀಯ ಸಮಿತಿ ಸಲ್ಲಿಸಿದ ವರದಿ ಆಧರಿಸಿ ಈ ತೀರ್ಪು ನೀಡಿದ್ದಾರೆ. ಬಾಲಕಿಯ ಸುರಕ್ಷತೆ ಹಾಗೂ ಯೋಗಕ್ಷೇಮವೇ ಪ್ರಮುಖ ಆದ್ಯತೆ ಎಂದು ಹೇಳಿದ ನ್ಯಾಯಾಲಯ 12 ವರ್ಷದ ಬಾಲಕಿಯ ಆರು ತಿಂಗಳ ಗರ್ಭಾವಸ್ಥೆಯನ್ನು ಅಂತ್ಯ ಮಾಡುವುದಕ್ಕೆ ಅನುಮತಿ ನೀಡಿದೆ.
ಪರಿಸ್ಥಿತಿಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಅಪ್ರಾಪ್ತ ವಯಸ್ಸಿನ ಬಾಲಕಿ ಕಲ್ಯಾಣ ಹಾಗೂ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಎಂದು ಪೀಠ ಹೇಳಿದೆ. 12 ವರ್ಷದ ಬಾಲಕಿಯನ್ನು ಆಕೆಯ 14 ವರ್ಷದ ಸೋದರನೇ ಅತ್ಯಾಚಾರ ಮಾಡಿದ್ದ, ಆತನ ವಿರುದ್ಧ ಕೇಸು ದಾಖಲಾಗಿದೆ. ಇತ್ತ ಬಾಲಕಿಯ ತಾಯಿ ಹೈಕೋರ್ಟ್‌ನಲ್ಲಿ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ತಿಂಗಳ ಆರಂಭದಲ್ಲಿ ಬಾಲಕಿ ತನಗೆ ಹೊಟ್ಟೆನೋವು ಆಗುತ್ತಿದೆ ಎಂದು ತಾಯಿಯ ಬಳಿ ಹೇಳಿಕೊಂಡಿದ್ದಳು. ಈ ವೇಳೆ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದಾಗ ಆಕೆ ಗರ್ಭಧರಿಸಿರುವುದು ಬೆಳಕಿಗೆ ಬಂದಿತ್ತು.
ಇದಾದ ನಂತರ ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ತನ್ನ ಹಿರಿಯಣ್ಣನೇ ಮನೆಯಲ್ಲಿ ಯಾರು ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ತನ್ನ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದಲ್ಲಿ ಪರಿಸ್ಥಿತಿ ಸರಿ ಇರಲ್ಲ ಎಂದು ಬೆದರಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಅಡಿ ಬರುವ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಪೋಸ್ಕೋದಡಿ ಬಾಲಕಿಯ ಅಣ್ಣನ ವಿರುದ್ಧ ಕೇಸು ದಾಖಲಿಸಿದ ಪೊಲೀಸರು ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ್ದಾರೆ. ಸೋದರನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ 12 ವರ್ಷದ ಬಾಲಕಿಯ ಗರ್ಭಪಾತಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಬಾಂಬೆ ಹೈಕೋರ್ಟ್‌ನ ರಜಾ ಕಾಲದ ಪೀಠದ ನ್ಯಾಯಾಧೀಶರಾದ ಸಂದೀಪ್ ಮರ್ನೆ ಹಾಗೂ ನೀಲಾ ಗೋಖಲೆ ಅವರು ವೈದ್ಯಕೀಯ ಸಮಿತಿ ಸಲ್ಲಿಸಿದ ವರದಿ ಆಧರಿಸಿ ಈ ತೀರ್ಪು ನೀಡಿದ್ದಾರೆ. ಬಾಲಕಿಯ ಸುರಕ್ಷತೆ ಹಾಗೂ ಯೋಗಕ್ಷೇಮವೇ ಪ್ರಮುಖ ಆದ್ಯತೆ ಎಂದು ಹೇಳಿದ ನ್ಯಾಯಾಲಯ 12 ವರ್ಷದ ಬಾಲಕಿಯ ಆರು ತಿಂಗಳ ಗರ್ಭಾವಸ್ಥೆಯನ್ನು ಅಂತ್ಯ ಮಾಡುವುದಕ್ಕೆ ಅನುಮತಿ ನೀಡಿದೆ.
ಪರಿಸ್ಥಿತಿಯ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು, ಅಪ್ರಾಪ್ತ ವಯಸ್ಸಿನ ಬಾಲಕಿ ಕಲ್ಯಾಣ ಹಾಗೂ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಎಂದು ಪೀಠ ಹೇಳಿದೆ. 12 ವರ್ಷದ ಬಾಲಕಿಯನ್ನು ಆಕೆಯ 14 ವರ್ಷದ ಸೋದರನೇ ಅತ್ಯಾಚಾರ ಮಾಡಿದ್ದ, ಆತನ ವಿರುದ್ಧ ಕೇಸು ದಾಖಲಾಗಿದೆ. ಇತ್ತ ಬಾಲಕಿಯ ತಾಯಿ ಹೈಕೋರ್ಟ್‌ನಲ್ಲಿ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ತಿಂಗಳ ಆರಂಭದಲ್ಲಿ ಬಾಲಕಿ ತನಗೆ ಹೊಟ್ಟೆನೋವು ಆಗುತ್ತಿದೆ ಎಂದು ತಾಯಿಯ ಬಳಿ ಹೇಳಿಕೊಂಡಿದ್ದಳು. ಈ ವೇಳೆ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದಾಗ ಆಕೆ ಗರ್ಭ ಧರಿಸಿರುವುದು ಬೆಳಕಿಗೆ ಬಂದಿತ್ತು.
ಇದಾದ ನಂತರ ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ ತನ್ನ ಹಿರಿಯಣ್ಣನೇ ಮನೆಯಲ್ಲಿ ಯಾರು ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ತನ್ನ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದಲ್ಲಿ ಪರಿಸ್ಥಿತಿ ಸರಿ ಇರಲ್ಲ ಎಂದು ಬೆದರಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯ ಅಡಿ ಬರುವ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಪೋಸ್ಕೋದಡಿ ಬಾಲಕಿಯ ಅಣ್ಣನ ವಿರುದ್ಧ ಕೇಸು ದಾಖಲಿಸಿದ ಪೊಲೀಸರು ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ್ದಾರೆ.
Post a comment
Log in to write reviews