ಬೆಂಗಳೂರು: ಮಳೆಯಿಂದಾಗಿ ನಗರದ ಕೆಲ ಪ್ರದೇಶಗಳಲ್ಲಿ ಮನೆಯೊಳಗೆ ಮತ್ತು ಮನೆಯ ಸುತ್ತಮುತ್ತ ಹೆಚ್ಚಾಗಿ ಹಾವುಗಳು ಕಾಣಿಸಿಕೊಳ್ಳುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ನಗರದಲ್ಲಿ ಮಳೆ ಆರ್ಭಟ ಜೋರಾಗಿದೆ. ಇದರ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ಥ, ಮನೆಯೊಳಗೆ ನೀರು ನುಗ್ಗಿ
ಅವಾಂತರ ಸೃಷ್ಟಿಸಿದೆ. ಇದರ ಜತೆಗೆ ಇದೀಗ ನಗರದ ಜನತೆಗೆ ಹಾವುಗಳ ಕಾಟ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ನಗರ ಕೆಲ ಪ್ರದೇಶಗಳಲ್ಲಿ ಮನೆಯೊಳಗೆ ಮತ್ತು ಮನೆಯ ಸುತ್ತಮುತ್ತ ಹಾವು ಕಾಣಿಸಿಕೊಂಡಿದ್ದು ಭಯಭೀತರಾಗುವಂತೆ ಮಾಡಿದೆ. ಬೊಮ್ಮನ್ನಹಳ್ಳಿ, ಬ್ಯಾಟರಾಯನಪುರ, ದಾಸರಹಳ್ಳಿ, ಮಹದೇವಪುರ ಮತ್ತು ರಾಜರಾಜೇಶ್ವರಿ ನಗರ ವಯಲಗಳಲ್ಲಿ ಹಾವುಗಳು ಕಾಣಿಸಿಕೊಂಡಿವೆ. ಈ ಸಂಬಂಧ ಸುಮಾರು 110 ಕರೆಗಳು ಬಂದಿವೆ. ಯಲಹಂಕ ಮತ್ತು ಬೊಮ್ಮನಹಳ್ಳಿಯಿಂದ ಹೆಚ್ಚಿನ ಕರೆಗಳು ಬರುತ್ತಿವೆ ಎಂದು ಬಿಬಿಎಂಪಿಯ ವನ್ಯಜೀವಿ ಸಂರಕ್ಷಣಾ ತಂಡ ಹೇಳಿದೆ. ಸಾರ್ವಜನಿಕರು ಸಹಾಯವಾಣಿಗೆ ಕರೆ ಮಾಡಿದರೂ ರಕ್ಷಣಾ ಕಾರ್ಯದಲ್ಲಿ ವಿಳಂಭವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Post a comment
Log in to write reviews