ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜೂನ್ 23 ರಂದು ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣಗೆ ಈಗ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಪ್ರಕರಣ ನಡೆದು 29 ದಿನಗಳ ನಂತರ ಸೂರಜ್ ಗೆ ಜಾಮೀನು ಸಿಕ್ಕಿದೆ. ಸೂರಜ್ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಒಂದು ಕೇಸ್ ನಲ್ಲಿ ಮಾತ್ರ ಜಾಮೀನು ಮಂಜೂರಾಗಿದೆ. ನ್ಯಾಯಧೀಶ.ಸಂತೋಷ್ ಗಜಾನನ ಭಟ್ ಅವರಿಂದ ಷರತ್ತುಬದ್ಧ ಜಾಮೀನು ನೀಡಿದೆ.
ಷರತ್ತುಗಳು: ದೂರುದಾರರಿಗೆ ಮತ್ತು ಸಂತ್ರಸ್ತರಿಗೆ ಬೆದರಿಕೆ ಹಾಕುವಂತಿಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳವಂತಿಲ್ಲ. ಕರೆದಾಗಲೆಲ್ಲ ವಿಚಾರಣೆಗೆ ಹಾಜರಾಗಬೇಕು. ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒದಗಿಸಬೇಕು. ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆಯದೆ ರಾಜ್ಯ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಬಾರದು. ಸಂತ್ರಸ್ಥನನ್ನು ಯಾವುದೇ ರೀತಿಯಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ 6 ತಿಂಗಳ ಅವಧಿಗೆ ಹಾಜರಾತಿ ಹಾಕಬೇಕು ಎಂದು ಷರತ್ತುಗಳನ್ನು ನ್ಯಾಯಲಯ ವಿಧಿಸಿದೆ.
Post a comment
Log in to write reviews