ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ ಮಾಡಲಾಗಿದೆ.
ಸಾರಿಗೆ ಹಾಗು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದು ಸೋಲು ಕಂಡಿದ್ದರು.
ಎಐಸಿಸಿ ಮೂರು ರಾಜ್ಯಗಳ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿಲು ಆದೇಶ ಹೊರಡಿಸಿದೆ. ಕರ್ನಾಟಕ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಸೌಮ್ಯಾ ರೆಡ್ಡಿ ನೇಮಕದ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.
ಪುಷ್ಪಾ ಅಮರನಾಥ್ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಲೋಕಸಭೆ ಚುನಾವಣೆಗೂ ಮೊದಲೇ ಅವರ ಅಧಿಕಾರಾವಧಿ ಪೂರ್ಣಗೊಂಡಿತ್ತು. ಸದ್ಯ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರು. ಆದ್ದರಿಂದ ರಾಜ್ಯ ಮಹಿಳಾ ಘಟಕಕ್ಕೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Post a comment
Log in to write reviews