ಟಾಪ್ 10 ನ್ಯೂಸ್
ಸುಳ್ಳು ಸುದ್ದಿ ತಡೆಹಿಡಿಯಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಘಟಕ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ ಸಮಾಜಕ್ಕೆ ಅಪಾಯಕಾರಿ, ನಕಲಿ ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಘಟಕ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿಯಾಗಿ ಇಂದು ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ಸುಳ್ಳು ಸುದ್ದಿ ಸಮಾಜಕ್ಕೆ ಮಾರಕವಾಗಿದೆ. ನಕಲಿ ಸುದ್ದಿಗಳ ಮೇಲೆ ನಿಗಾ ಇಡಲು ಪ್ರತಿ ಜಿಲ್ಲೆಯಲ್ಲಿ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ನಕಲಿ ಸುದ್ದಿ ಪತ್ತೆ ಹಚ್ಚಲಾಗುತ್ತಿದೆ ಎಂದರು. ಸುಳ್ಳು ಸುದ್ದಿ ಪತ್ತೆ, ನಿಯಂತ್ರಣ ಮತ್ತು ಕ್ರಮ ಕೈಗೊಳ್ಳಲು ಎಲ್ಲ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಹೇಳಿದರು.
Post a comment
Log in to write reviews