ದೀಪಾವಳಿ ಹಬ್ಬ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಪ್ರಯಾಣಿಕರ ಬೇಡಿಕೆ ಮತ್ತು ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ಬೆಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬೇಡಿಕೆ ಮತ್ತು ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಎಸ್ಎಂವಿಟಿ ಬೆಂಗಳೂರು-ಕಲಬುರಗಿ, ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.
Post a comment
Log in to write reviews