ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳಿಂದ ಸಂಭವಿಸುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸರು ಚಾಲಕರಿಗೆ ನೀಡಿದ ವಿಶೇಷ ತರಬೇತಿ ಫಲಿಸಿದೆ.
ಬಿಎಂಟಿಸಿ ಬಸ್ಗಳಿಂದ ಸಂಭವಿಸುತ್ತಿದ್ದ ಅಪಘಾತ ಸಂಖ್ಯೆ ಕಡಿಮೆಯಾಗಿದೆ. ಕಳೆದ ಮೂರು ವರ್ಷಕ್ಕೆ ಹೋಲಿಕೆ ಮಾಡಿದರೆ, 2024ರಲ್ಲಿ ಇಲ್ಲಿಯವರೆಗೆ ಕೇವಲ ನಾಲ್ಕು ಅಪಘಾತಗಳು ಸಂಭವಿಸಿವೆ. ಈ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಫಲ ಸಿಕ್ಕಿದೆ.
ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರತಿದಿನ 12 ಗಂಟೆ ಕೆಲಸ ಮಾಡುತ್ತಾರೆ. ಟ್ರಾಫಿಕ್ ನಡುವೆ 12 ಗಂಟೆ ಕೆಲಸ ಮಾಡಿ ಚಾಲಕರು ದೈಹಿಕ ಮತ್ತು ಮಾನಸಿಕವಾಗಿ ದಣಿದಿರುತ್ತಾರೆ. ಇದರಿಂದ ತಿರುವುಗಳಲ್ಲಿ ಮತ್ತು ಜನ ದಟ್ಟಣೆ ಇರುವ ಸ್ಥಳದಲ್ಲಿ ಅಪಘಾತ ಸಂಭವಿಸುತ್ತಿದ್ದವು.
ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಬಿಎಂಟಿಸಿ ಬಸ್ ಚಾಲಕರಿಗೆ ಕಳೆದ 6 ತಿಂಗಳಿನಿಂದ ತರಬೇತಿ ನೀಡಲು ಆರಂಭಿಸಿದ್ದಾರೆ. ಪ್ರತಿದಿನ 50 ಜನರಂತೆ 12 ಸಾವಿರ ಬಿಎಂಟಿಸಿ ಬಸ್ ಚಾಲಕರಿಗೂ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸುಮಾರು 8 ಸಾವಿರ ಚಾಲಕರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
Post a comment
Log in to write reviews