ಹುಬ್ಬಳ್ಳಿ: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ನಲ್ಲಿ ನಡೆದಿದೆ.
ಸವಿತಾ ನರಗುಂದ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸವಿತಾ ನರಗುಂದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹೂವಿನಶಿಗ್ಲಿ ಗ್ರಾಮದವಳಾಗಿದ್ದು, ಈಕೆ ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಬಿಎಸ್ಸಿ 5ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದಳು. ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆರೆಯಿಂದ ಶವವನ್ನು ಹೊರೆತೆಗೆದು ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
Post a comment
Log in to write reviews