ಹಾವೇರಿ: ಹಿರೇಕೆರೂರು ತಾಲ್ಲೂಕಿನ ಸಾತೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ಸಂಸತ್ ರಚನಾ ಪ್ರಕ್ರಿಯೆ ನಡೆಯಿತು.
ಚುನಾವಣಾ ಆಯೋಗ ಯಾವರೀತಿ ಕ್ರಮಬದ್ದವಾಗಿ ಚುನಾವಣೆಯನ್ನು ನಡೆಸುತ್ತದೆಯೋ ಅದೇರಿತಿ ಈ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಚುನಾವಣೆಯ ಪ್ರಕ್ರಿಯೆಯನ್ನು ತಿಳಿಸಲು ಮತದಾನದ ವ್ಯವಸ್ಥೆಯನ್ನು ಮಾಡಿದ್ದರು. ಮಕ್ಕಳು ತಮ್ಮ ಗುರುತಿನ ಚೀಟಿಯಾಗಿ ಆಧಾರ ಕಾರ್ಡ್ ಅನ್ನು ತಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಮತದಾನ ಮಾಡುವ ಮೂಲಕ ತಮ್ಮ ಸ್ನೇಹಿತರು ಕೂಡ ಮತದಾನ ಮಾಡುವಂತೆ ಪ್ರೇರೇಪಿಸುತ್ತಿದ್ದರು.
ಎರಡು ದಿನಗಳಿಂದ ಶಾಲಾ ಸಂಸತ್ ರಚನೆ ಮಾಡಿಕೊಳ್ಳಲು ಚುನಾವಣಾ ಪ್ರಕ್ರಿಯೆಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಶಾಲೆಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ತಾವು ತಯಾರಿಸಿಕೊಂಡಿರುವ ಅಜೆಂಡಾವನ್ನು ಇತರೆ ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟು ಮತ ನೀಡುವಂತೆ ಮತಯಾಚಿಸಿದರು. ಶಾಲಾ ಆವರಣದಲ್ಲಿ ಸೇರಿದ್ದ ಮಕ್ಕಳು ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿ. ಆಯ್ಕೆ ಮಾಡಿದರು.
Post a comment
Log in to write reviews