ತನ್ನನ್ನು ಡುಮ್ಮಿ ಎಂದು ಪತಿ ಹೀಯಾಳಿಸಿ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತು ಖಾಸಗಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜುನಾಥ ನಗರದ ನಿವಾಸಿ ಸಂಧ್ಯಾ (31) ಮೃತ ದುರ್ದೈವಿ. ಮನೆಯಲ್ಲಿ ಗುರುವಾರ ಸಂಜೆ ನೇಣು ಬಿಗಿದುಕೊಂಡು ಸಂಧ್ಯಾ ಆತ್ಮಹತ್ಯೆ ಯತ್ನಿಸಿದ್ದಾರೆ. ತಕ್ಷಣವೇ ಆಕೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದಾರೆ. ಆದರೆ ಆ ವೇಳೆಗೆ ಸಂಧ್ಯಾ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Post a comment
Log in to write reviews