ಬೆಂಗಳೂರು: ರೇವ್ ಪಾರ್ಟಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎನ್ಡಿಪಿಎಸ್ ವಿಶೇಷ ಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಹೇಮಾ ಇಂದು ಜೈಲಿನಿಂದ ಹೊರ ಬಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಎನ್ಡಿಪಿಎಸ್ ವಿಶೇಷ ಕೋರ್ಟ್ ಜೂನ್ 12ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ಸಿಕ್ಕಿ ಎರಡು ದಿನಗಳ ಬಳಿಕ ನಟಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಇತ್ತೀಚೆಗೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್ನಲ್ಲಿರೋದಾಗಿ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿ ನಾಟಕವಾಡಿದ್ದರು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಬಳಿಕ ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಜಾಮೀನು ಪಡೆದು ಹೇಮಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Post a comment
Log in to write reviews