2010ರಲ್ಲಿ ನಡೆದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇನ್ನೂ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿ 200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಕೈಗನ್ನಡಿದೆ. ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ. ಬೇಲೇಕೇರಿ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಿಂದ ಮತ್ತೆ ಇದು ಸಾಬೀತಾಗಿದೆ ಎಂದಿದ್ದಾರೆ.
ಸದ್ಯ 200 ಕೋಟಿ ರೂಪಾಯಿ ಮೌಲ್ಯದ 39,700 ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಚೀನಾಕ್ಕೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇಬ್ಬರು ಸಹಚರರನ್ನು ಬಂಧಿಸಲು ಆದೇಶಿಸಿದ ಜನಪ್ರತಿನಿಧಿ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹೀಗಿರುವಾಗ ಆ ಪಕ್ಷದ ಉಳಿದ ನಾಯಕರಲ್ಲಿ ಪ್ರಾಮಾಣಿಕತೆಯನ್ನು ಅಪೇಕ್ಷಿಸಲು ಸಾಧ್ಯವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
Post a comment
Log in to write reviews