ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಅದನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಮುಂದಾಗಿದೆ. ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹೊಸದಾಗಿ ಇಲಾಖೆಯು ಬಣ್ಣ ಸಂಹಿತೆ ಜಾರಿಗೋಳಿಸಿದೆ. ಅದರಂತೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಿದೆ. ಈ ನಿಯಮವನ್ನ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕೆಪಿಎಮ್ಇ ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5)ಪ್ರಕಾರ ಕಡಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ವತಿಯಿಂದ ಎಚ್ಚರಿಕೆ ನೀಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ನಕಲಿ ಮತ್ತು ಅರ್ಹತೆ ಇಲ್ಲದ ವೈದ್ಯರು ಹೆಚ್ಚಾಗಿದ್ದು ಸಮಾಜಕ್ಕೆ ಕಂಟಕವಾಗಿ ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Post a comment
Log in to write reviews