ಬೆಂಗಳೂರು ನಗರದಲ್ಲಿ ಅತಿಯಾದ ಉಷ್ಣಾಂಶ ಹಾಗು ಚುನಾವಣೆ ನೀತಿ ಸಂಹಿತೆಯಿಂದಾಗಿ ಕಲೆಯನ್ನೆ ನಂಬಿಕೊಂಡವರ ಬದುಕು ತಾಳ ತಪ್ಪಿದಂತಾಗಿದೆ.
ಏಪ್ರಿಲ್-ಮೇ ತಿಂಗಳಲ್ಲಿ ಮಕ್ಕಳಿಗೆ ಬೇಸಿಗೆ ರಜೆ ಇರುವುದರಿಂದ ಪ್ರತಿ ವಷ೯ ಈ ಅವಧಿಯಲ್ಲಿ ತಿಂಗಳು ಪೂತಿ೯ ಸಾಂಸ್ಕೃತಿಕ ಕಾಯ೯ಕ್ರಮಗಳು ನಡೆಯುತ್ತಿದ್ದವು. ಆದರೆ ಈ ಬಾರಿ ನೀತಿ ಸಂಹಿತೆ ಜಾರಿ ಮತ್ತು ಬಿಸಿಲಿನ ತಾಪವೂ ಹೆಚ್ಚಾಗಿದೆ. ಆದ್ದರಿಂದ ಸಂಘ ಸಂಸ್ಥೆಗಳು ದೊಡ್ಡ ಮಟ್ಟದ ಕಾಯ೯ಕ್ರಮಗಳಿಗೆ ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಸಂಸ್ಕೃತಿ ಇಲಾಖೆಯಿಂದ ಸೂಕ್ತ ಪ್ರೋತ್ಸಾಹ ದೊರೆಯುತ್ತಿಲ್ಲ. ಧನಸಹಾಯವನ್ನು ಕಂತು ರೂಪದಲ್ಲಿ ನೀಡಿದ್ದರಿಂದ ಕಲಾವಿದರು ಸಂಕಷ್ಟಕ್ಕೆ ಸಿಲುಕಿ, ವ್ಯಾಪಾರ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಲಾವಿದ ಜಯಸಿಂಹ ಎಸ್ ಬೇಸರ ವ್ಯಕ್ತಪಡಿಸಿದ್ದಾರೆ.
Post a comment
Log in to write reviews