ಮಧ್ಯಪ್ರದೇಶ: ಶಾಲೆಯಲ್ಲಿ ಶಿಕ್ಷಕರು ಹಾಗು ಕಟ್ಟಡ ವ್ಯವಸ್ಥೆ ಇದ್ದರೂ ಶಾಲೆಯಲ್ಲಿ ಒಂದೇ ಒಂದು ಮಕ್ಕಳು ಇಲ್ಲದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದ ಜಿಲ್ಲೆಯಲ್ಲಿ ನಡೆದಿದೆ
ಜಿಲ್ಲೆಯಲ್ಲಿ ಸುಮಾರು 299 ಶಾಲೆಗಳಿವೆ. ಒಟ್ಟು 2581 ಪ್ರಾಥಮಿಕ ಮತ್ತು ಮಧ್ಯಮ ಶಾಲೆಗಳಿವೆ ಈ ಶಾಲೆಗಳಲ್ಲಿ ಒಂದನೇ ತರಗತಿಗೆ ಒಂದೇ ಒಂದು ಪ್ರವೇಶವೂ ಆಗಿಲ್ಲ .2581 ಶಾಲೆಗಳಲ್ಲಿ 805 ಶಾಲೆಗಳಲ್ಲಿ ಮಾತ್ರ ಒಬ್ಬರು ಅಥವಾ ಇಬ್ಬರು ಮಕ್ಕಳು ಪ್ರವೇಶ ಪಡೆದುಕೊಂಡಿರುವುದು ಆಘಾತಕಾರಿ ವಿಷಯ.
ಶಾಲೆ ತೊರೆದ 40 ಸಾವಿರ ಮಕ್ಕಳು: ಕಳೆದ ಐದು ವರ್ಷಗಳಲ್ಲಿ 40 ಸಾವಿರ ಮಕ್ಕಳು ಸರ್ಕಾರಿ ಶಾಲೆಗಳನ್ನು ತೊರೆದಿದ್ದಾರೆ, ಚಿಂದ್ವಾರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಸುಮಾರು 40 ಸಾವಿರದಷ್ಟು ಕಡಿಮೆಯಾಗಿದೆ. ಶಾಲಾ ಕಟ್ಟಡದಿಂದ ಹಿಡಿದು ಶಿಕ್ಷಕರವರೆಗೆ ಇಲ್ಲಿ ಎಲ್ಲ ಸುಸಜ್ಜಿತ ವ್ಯವಸ್ಥೆ ಇದ್ದು. 1 ನೇ ತರಗತಿಗೆ ಪ್ರವೇಶ ಪಡೆಯುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಇದಕ್ಕಾಗಿ ಬಿಆರ್‌ಸಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿದ್ದು, ಈ ಶಾಲೆಗಳಲ್ಲಿ ನೋಂದಣಿ ಸಂಖ್ಯೆ ಹೆಚ್ಚಿಸುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಪೋಷಕರ ಅಭಿಪ್ರಾಯ : ಜಿಲ್ಲಾ ಪಾಲಕರ ಸಂಘದ ಸದಸ್ಯ ಅನುಜ್ ಚೌಕ್ಸೆ ಮಾತನಾಡಿ, ‘ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿದ್ದರೂ ಉತ್ತಮ ಶಿಕ್ಷಣಕ್ಕಾಗಿ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ ಸೇರಿಸುತ್ತಿದ್ದಾರೆ. ಏಕೆಂದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ಹೆಚ್ಚಿನ ಸಂಬಳ ಮತ್ತು ಎಲ್ಲಾ ಸೌಲಭ್ಯಗಳಿದ್ದರೂ ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ. ಹೀಗಾಗಿ ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ ಎಂದಿದ್ದಾರೆ.
Post a comment
Log in to write reviews