ಅಲಿಗಢ: ಹೆತ್ತು ಸಾಕಿರುವ ತಾಯಿಯನ್ನೇ ಮಗನೊಬ್ಬ ಪೊಲೀಸ್ ಠಾಣೆಯ ಆವರಣದಲ್ಲಿಯೇ ಹತ್ಯೆ ಮಾಡಿರುವ ಘಟನೆ ಅಲಿಗಢದಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಘೋರ ಹತ್ಯೆ ಮಾಡಿದ್ದಾನೆ. ಗಾಯಗೊಂಡ ಮಹಿಳೆಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆಯ ಸ್ಥಿತಿ ಗಂಭೀರವಾಗಿರುವುದನ್ನ ಕಂಡು ವೈದ್ಯರು ಆಕೆಯನ್ನು ಅಲಿಗಢಕ್ಕೆ ಕಳುಹಿಸಿದ್ದರು, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಹತ್ಯೆಯಲ್ಲಿ ಮಹಿಳೆಗೆ ಶೇ.80ರಷ್ಟು ಭಾಗ ಸುಟ್ಟು ಹೋಗಿತ್ತು. ಪೊಲೀಸರು ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದ್ದು, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಆಕೆಯ ಮಗ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
Post a comment
Log in to write reviews