ಪರಿಷತ್ ಚುನಾವಣೆ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಬಂದಿದ್ದಾಗ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪನವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಗ್ಯಾರಂಟಿ ಯೋಜನೆಯೇ ಕಾರಣ. ಅದೇ ರೀತಿ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಪರಿಷತ್ ಚುನಾವಣೆ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಬಂದಿದ್ದೇನೆ. ಸದನದಲ್ಲಿ ಮರಿತಿಬ್ಬೆಗೌಡರು ಹೋರಾಟ ಮಾಡುತ್ತಾರೆ. ಮರಿತಿಬ್ಬೆಗೌಡರು ಶಿಕ್ಷಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ, ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿವೆ. ರಾಜ್ಯದಲ್ಲಿ 53 ಸಾವಿರ ಶಿಕ್ಷಕರ ಕೊರತೆ ಇದೆ. 12 ಸಾವಿರ ಶಿಕ್ಷಕರನ್ನ ಈಗ ನೇಮಕ ಮಾಡಲಾಗಿದೆ,ಅನುದಾನಿತ ಶಾಲೆಗಳ 6 ಸಾವಿರ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆಯನ್ನ ಬಗೆಹರಿಸುತ್ತೇವೆ.ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಈಗಾಗಲೇ 95% ರಷ್ಟು ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಮಾಡಲಾಗಿದೆ ಈ ತಿಂಗಳ ಒಳಗೆ 100% ವಿತರಣೆ ಮಾಡುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರಿಗೆ ಒತ್ತಡ ವಿಚಾರವಾಗಿ ನಾವು ಯಾವುದೇ ಕಾರಣಕ್ಕೂ ಶಿಕ್ಷಕರಿಗೆ ಒತ್ತಡ ಹಾಕುತ್ತಿಲ್ಲ. ಈ ಹಿಂದೆ ಈ ಸಿಸ್ಟಮ್ ಇತ್ತು. ಶಿಕ್ಷಕರ ಮೇಲೆ ಪ್ರಭಾವ ಬಳಸಿ ಮತ ಹಾಕಿಸಲಿಕ್ಕೆ ಮುಂದಾಗುತ್ತಿದ್ರು. ಯಾರೇ ಶಿಕ್ಷಕರಾಗಲಿ ಶಿಕ್ಷಣದ ಬಗ್ಗೆ ಮಾತ್ರ ಕಾಳಜಿ ವಹಿಸಬೇಕು. ಇಲ್ಲಿ ಯಾರು ಕೂಡ ರಾಜಕೀಯ ಬಳಸಬಾರದು. ಒಂದು ವೇಳೆ ರಾಜಕೀಯ ವಿಚಾರಗಳಲ್ಲಿ ಭಾಗಿಯಾಗ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ರೆ ಅಂತವರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
Post a comment
Log in to write reviews