ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ : ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ
ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡದಂತೆ ಹಾಸನ ಜನರೇ ಹೇಳಿದ್ದರು. ಆದರೂ, ಆತನಿಗೆ ಟಿಕೆಟ್ ನೀಡಲಾಯಿತು. ಈ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಅವರ ಹೆಸರು ಕೇಳಿಬಂದಿದೆ.
ಹುಬ್ಬಳ್ಳಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಾಚನೆ ವೇಳೆ ತನ್ನ ಮಗ ಎಂದಿದ್ದ ಕುಮಾರಸ್ವಾಮಿ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಪುತ್ರ ವ್ಯಾಮೋಹದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಆರೋಪಿಗಳ ರಕ್ಷಣೆಗೆ ಮುಂದಾಗದಿರಲಿ. ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು.
ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ ಎನ್ನುವ ಕುರಿತು ಪ್ರತಿಕ್ರಿಯಿಸಿದ ಅವರು, ಸಿಬಿಐ ಕೇಂದ್ರ ಸರ್ಕಾರದ ಅಡಿಯಲ್ಲಿರುವುದರಿಂದ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಯಾಕಿನ್ನು ಪಕ್ಷದಲ್ಲಿಟ್ಟುಕೊಂಡಿದ್ದೀರಿ ಎಂದು ಸಿಡಿದರು.
ಈ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ, ಮುಂದಿನ ದಿನಗಳಲ್ಲಿ ಚುನಾವಣೆಯೇ ಇರುವುದಿಲ್ಲ. ಸರ್ವಾಧಿಕಾರ ಘೋಷಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
Tags:
- kannada live tv
- kannada news channel
- kannada tv channel
- kannada live news
- kannada latest news
- karnataka political developments
- karnataka latest news
- karnataka politics
- today news
- kannada news live
- live news
- live karnataka news
- star chandru
- election compaign
- lok sabha election 2024
- mp election 2024
- mandya
- mukhyamantri chandru
Post a comment
Log in to write reviews