ಕೇಂದ್ರ ತೆರಿಗೆ ಹಣ ಕೊಟ್ಟರೆ ರಾಜ್ಯದಲ್ಲಿ ಬೆಲೆ ಹೆಚ್ಚಿಸುವ ಅಗತ್ಯ ಇಲ್ಲ : ಸಿಎಂ
ಬೆಂಗಳೂರು : ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ಅದರಲ್ಲೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ.
ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದವರೊಂದಿಗೆ ವಿವರಿಸಿದರು.
2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿಯಾಗಿದೆ ಎಂದು ತಿಳಿಸಿದ್ದಾರೆ.
Post a comment
Log in to write reviews