ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಮಲೆನಾಡು ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ.
ಗುಡುಗು ಸಹಿತ ಮಳೆ
ಬೆಂಗಳೂರುನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಡಿಗ್ರಿ 28 ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ ಅಬ್ಬರ
ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನನ್ನು ಹವಮಾನ ಇಲಾಖೆ ಘೋಷಣೆ ಮಾಡಲಾಗಿದೆ.
Post a comment
Log in to write reviews