Samayanews.

Samayanews.

2024-12-23 11:25:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ, ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಮಳೆಯಾಗಲಿದೆ ಎನ್ನಲಾಗಿದೆ.

ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಕಷ್ಟು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ಹಗುರದಿಂದ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಸೆಪ್ಟೆಂಬರ್‌ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

img
Author

Post a comment

No Reviews