ಬೆಂಗಳೂರು: ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ತಮ್ಮ ಕುಟುಂಬದ ಸದಸ್ಯರ ಆಧಾರ್ ಜೋಡಣೆ ಮಾಡಿಲ್ಲ. ಜೋಡಣೆಯಾಗದ ಪಲಾನುಭವಿಗ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಲಾಗುತ್ತದೆ. ಆದ್ದರಿಂದ ತಮ್ಮ ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಯಾರೆಲ್ಲ ಇದುವರೆಗೆ ಪಡಿತರ ಚೀಟಿಗೆ ಜೊತೆ ಆಧಾರ್ ಕಾರ್ಡ್ ಜೋಡಣೆ ಮಾಡಿಲ್ಲವೋ ಕೂಡಲೇ ಲಿಂಕ್ ಮಾಡಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ತಿಳಿಸಿದೆ.
Post a comment
Log in to write reviews