ಮುಬೈ : ಮುಂದಿನ ವರ್ಷದ ಐಪಿಎಲ್(IPL 2025) 18ನೇ ಆವೃತ್ತಿಗೆ ನಡೆಯುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಕುರಿತು ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ಎಲ್ಲ 10 ಫ್ರಾಂಚೈಸಿಗಳ ಜೊತೆ ಆಗಸ್ಟ್1ರಂದು ಮುಬೈನಲ್ಲಿ ಸಭೆ ನಡೆಸಲಿದೆ.
ಈ ಸಭೆಯಲ್ಲಿ ಹಲವು ಫ್ರಾಂಚೈಸಿಗಳು 8 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅನುಮತಿ ನೀಡುವಂತೆ ಪಟ್ಟು ಹಿಡಿಯಲಿದೆ ಎಂದು ತಿಳಿದುಬಂದಿದೆ. ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್, ಹಾಲಿ ಚಾಂಪಿಯನ್ ಕೆಕೆಆರ್ ಫ್ರಾಂಚೈಸಿ ಮಾಲಿಕರು ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ತಿಳಿದು ಬಂದಿದೆ. ಈ ಕುರಿತು ಕೆಲ ಟ್ವೀಟ್ಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಐಪಿಎಲ್ ಮುಖ್ಯಸ್ಥ ಅರುಣ್ ಧುಮಾಲ್ ಈ ಹಿಂದೆ ಹೇಳಿದ ಪ್ರಕಾರ ಈ ಬಾರಿ ಪ್ರತಿ ತಂಡಕ್ಕೆ 3-4 ಆಟಗಾರರನ್ನು ಮಾತ್ರ ರಿಟೇನ್ ಮಾಡಿಕೊಳ್ಳಲು ಅವಕಾಶ ಸಿಗಲಿದೆ ಎನ್ನಲಾಗಿದೆ. ಆದರೆ ಇದಕ್ಕೆ ಫ್ರಾಂಚೈಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಮನಸ್ಸುಮಾಡಿದೆ ಎನ್ನಲಾಗಿದೆ.
ಐದು ವರ್ಷಗಳಿಗೊಮ್ಮೆ ಮೆಗಾ ಹರಾಜು?
ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ, ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ.
Post a comment
Log in to write reviews