ನವದೆಹಲಿ: ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ - ಬ್ರುಗಢ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೆ ಒಳಗಾಗಿ ನಾಲ್ವರು ಮೃತರಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಎಕ್ಸ್ಪ್ರೆಸ್ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.
ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. 15904 ಸಂಖ್ಯೆ ರೈಲು ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ ಎನ್ನಲಾಗಿದೆ.
ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ಮಾಡಿರುವ ವೀಡಿಯೊಗಳಲ್ಲಿ, ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
Post a comment
Log in to write reviews