ಬೆಂಗಳೂರು: ಮಂಗಳವಾರ ಸುರಿದ ಭಾರೀ ಮಳೆಗೆ ಬೆಂಗಳೂರಿನ ಜನತೆ ತತ್ತರಿಸಿ ಹೋಗಿದ್ದಾರೆ. ನಗರದಲ್ಲಿ ಮಳೆಯು ಅವಾಂತರಗಳನ್ನೇ ಸೃಷ್ಟಿಸಿದ್ದು, ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತು ಇನ್ನೂ ಕೆಲವು ಕಡೆ ಮರ ಬಿದ್ದಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರೆ, ಮತ್ತೊಂದು ಕಡೆ ಮೆಟ್ರೋ ಟ್ರ್ಯಾಕ್ ಮೇಲೆ ಮರ ಬಿದ್ದು, ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಯಿತು. ನಂತರ ಬಿಎಂಆರ್ಸಿಎಲ್ ಅಧಿಕಾರಿಗಳು, ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ಮಾಡಿ ಮೆಟ್ರೋ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಡಚಣೆಯ ಸಂದರ್ಭದಲ್ಲಿ ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಟು ವೈಟ್ ಫೀಲ್ಡ್, ಎಂ ಜಿ ರಸ್ತೆ ಟು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಸಂಚಾರ ಮಾಡಿದ್ದವು. ಬೆಳಗ್ಗೆ 8.05 ರಿಂದ ನೇರಳೆ ಮಾರ್ಗದಲ್ಲಿ ಎಂದಿನಂತೆ ರೈಲುಗಳು ಓಡಾಡುತ್ತಿವೆ ಎಂದು ಬಿಎಂಆರ್ಸಿಎಲ್ ಎಕ್ಸ್ ಸಂದೇಶದ ಮೂಲಕ ತಿಳಿಸಿದೆ.
Post a comment
Log in to write reviews