ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್
ನಗರದಲ್ಲಿ ೩ ದಿನಗಳ ಕಾಲ ಮಳೆ ಅವಾಂತರ ಸೃಷ್ಠಿಸಿದ ಹಿನ್ನಲೆಯಲ್ಲಿ ಬಿ ಬಿ ಎಂ ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳೊಂದಿಗೆ ತುತು೯ ಸಭೆ ನಡೆಸಿದರು .
ಈ ಸಂಧಭ೯ ದಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದರು.
ಸೂಚನೆಗಳು ಹೀಗಿವೆ
1) ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು.
2)ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವುದು.
3) ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸುವುದು.
4) ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್ ಗಳ ಬಳಿ ಸ್ವಚ್ಚತೆ ಕಾಪಾಡುವುದು.
5)ಒಣಮರ ಕಟಾವು ಮಾಡುವುದು.
6) ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವುದು.
7) ನಗರದ ರಸ್ತೆ ಬದಿ, ಇಕ್ಕೆಲಗಳಲ್ಲಿ, ರಾಜಕಾಲುವೆಗಳಲ್ಲಿ/ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸುವುದು.
ಇದಿಷ್ಟು ಕೂಡ ಬಿಬಿಎಂಪಿ ವತಿಯಿಂದ ಅಧಿಕಾರಿಗಳಿಗೆ ನೀಡಿದ ಸೂಚನೆಗಳಾಗಿದ್ದು, ಇವುಗಳು ಯಶಸ್ವಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ 28 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಅದರ ಜೊತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೆ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಒಟ್ಟಾರೆಯಾಗಿ ಮಾನ್ಸೂನ್ ನಿಂದ ಜನಸಾಮನ್ಯರಿಗೆ ಯಾವುದೇ ತೊಂದರೆಯಾಗಂದತೆ ಬಿಬಿಎಂಪಿ ಉತ್ತಮ ಮುಂಜಾಗೃತ ಕ್ರಮ ಕೈಗೊಂಡಿದ್ದು, ಇದು ಯಶಸ್ವಿಯಾಗುತ್ತಾ ಎಂದು ಕಾದು ನೋಡಬೇಕಿದೆ.
Post a comment
Log in to write reviews