ವಿಜಯಪುರ: ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ ಎನ್ನಲಾಗಿದೆ.
ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಬೈಕ್ ಸವಾರ ಸಾವನ್ನಪ್ಪಿರುವ ಆರೋಪ ಕೇಳಿಬಂದಿದ್ದು, ಮನಗೂಳಿ ನಿವಾಸಿ ಭೀಮಶಿ ಹಿಟ್ನಳ್ಳಿ(56) ಹಾಗೂ ಖಂಡೋಬಾ (60) ಸಾವನ್ನಪ್ಪಿದ್ದು, ಈ ಇಬ್ಬರ ಸಾವಿನಿಂದ ರೊಚ್ಚಿಗೆದ್ದ ಮನಗೂಳಿ ಪಟ್ಟಣದ ಜನತೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದ ಘಟನೆಗೆ ಲಾರಿ ಚಾಲಕನೇ ಕಾರಣವೆಂದು ಆರೋಪಿಸಿ ಜಮಾಯಿಸಿದ ಜನರು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದು, ಜೊತೆಗೆ ಸಾವಿಗೀಡಾದ ಬೈಕ್ ಸವಾರರ ಕುಟುಂಬಕ್ಕೆ ಪರಿಹಾರ ನೀಡಬೇಕು. ಈ ಭಾಗದಲ್ಲಿ ಮೇಲ್ಸೆತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಧ್ಯ ಪ್ರತಿಭಟನಾ ನಿರತರ ಮನವೋಲಿಕೆ ಯತ್ನಿಸಿದ್ದು, ಪೊಲೀಸರ ಮನವೋಲಿಕೆಗೆ ಜಗ್ಗದ ಜನರು, ಪ್ರತಿಭಟನೆ ಮುಂದುವರೆಸಿದ್ದಾರೆ ಎನ್ನಲಾಗಿದೆ.
Post a comment
Log in to write reviews