ಎರಡು ಬಸ್ ಗಳ ನಡುವೆ ಸಿಲುಕಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಮೇ ಹತ್ತರಂದು ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ದ್ವಿಚಕ್ರ ವಾಹನದ ಸವಾರರು ಒಂದು ಬಸ್ಸಿನ ಮುಂದೆ ಚಲಿಸುತ್ತಿದ್ದರು ಅವರ ಹಿಂದಿನಿಂದ ಬಂದ ಬಸ್ಸೊಂದು ಎದುರಿನ ಬಸ್ಸಿಗೆ ಬಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಎರಡು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಮಧ್ಯ ಸಿಲುಕಿದ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹಿಂದಿನಿಂದ ಬಂದ ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Post a comment
Log in to write reviews