ಹಾವೇರಿ: ಸೈಬರ್ ಕ್ರೈಂ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ, ಇಬ್ಬರು ಸೈಬರ್ ಕಳ್ಳತನದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು ಮೂಲದ ರೂಪೇಶ್ ಹೆಚ್.ಎಂ. ಹಾಗೂ ಚಿಕ್ಕಮಂಗಳೂರಿನ ಚೇತನ್ ಎಂ.ಎಸ್. ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿತರು ಹಾವೇರಿ ಜಿಲ್ಲೆ ಸೇರಿದಂತೆ ವಿವಿಧೆಡೆ ಕಂಪ್ಯೂಟರ್, ಲ್ಯಾಪ್ಟಾಪ್ಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದರು. ಆರೋಪಿಗಳಿಂದ ಲ್ಯಾಪ್ಟಾಪ್ ಮತ್ತು ಸ್ಮಾರ್ಟ್ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತಂತೆ ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಕಾರ್ಯಾಚರಣೆಗೆ ಎಸ್ಪಿ ಅಂಶುಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Post a comment
Log in to write reviews