ಮಂಗಳೂರು: ತುಂಡಾದ ವಿದ್ಯುತ್ ತಂತಿ ಸ್ಪರ್ಶದಿಂದ ಇಬ್ಬರು ರಿಕ್ಷಾ ಚಾಲಕರು ಸಾವನ್ನಪ್ಪಿದ ಘಟನೆ ಗುರುವಾರ ಬೆಳಗ್ಗೆ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ರಾಜು ಮತ್ತು ದೇವರಾಜು ಮೃತ ದುರ್ದೈವಿಗಳು.
ಜೂನ್ 27ರಂದು ಬೆಳಗ್ಗೆ 4.30ರ ಸುಮಾರಿಗೆ ರಿಕ್ಷಾ ಸ್ವಚ್ಚಗೊಳಿಸಲೆಂದು ಹೊರ ಬಂದಿದ್ದರು. ಇದೆ ವೇಳೆಗೆ ರಿಕ್ಷಾ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಆಗ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಮತ್ತೋರ್ವ ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಅಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರೆ. ಮರಣೋತ್ತರ ಪರೀಕ್ಷೆಗೆಂದು ಎರಡೂ ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
Post a comment
Log in to write reviews