ನವದೆಹಲಿ: 18ನೇ ಲೋಕಸಭೆಯ ಸದಸ್ಯನಾಗಿ ಕುಮಾರಸ್ವಾಮಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಕ್ಷಣವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
18ನೇ ಲೋಕಸಭೆಯ ಸದಸ್ಯನಾಗಿ ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಗೌರವಾನ್ವಿತ ಹಂಗಾಮಿ ಸಭಾಧ್ಯಕ್ಷರಾದ ಶ್ರೀ ಭರ್ತೃಹರಿ ಮಹತಾಬ್ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ. ಇದು ನನ್ನ ಬದುಕಿನ ಅವಿಸ್ಮರಣೀಯ, ಹೆಮ್ಮೆಯ ಕ್ಷಣ. ಭಾರತದ ಪ್ರಜಾಪ್ರಭುತ್ವ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಎಲ್ಲಾ ತಂದೆ ತಾಯಂದಿರು, ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಅನಂತ ಧನ್ಯವಾದಗಳನ್ನು ಅರ್ಪಣೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
Post a comment
Log in to write reviews