ಉತ್ತರ ಪ್ರದೇಶ: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಫಲಿತಾಂಶದಲ್ಲಿ ಉತ್ತರಪ್ರದೇಶ ರಾಜ್ಯದ ಪಾತ್ರ ಬಹಳ ನಿರ್ಣಾಯಕವಾಗಿದ್ದು, ಒಟ್ಟು 80 ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಪ್ರಸ್ತುತ ಲಭ್ಯವಿರುವ ಮಾಹಿತಿಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಬಣ ಮುನ್ನಡೆ ಸಾಧಿಸಿದ್ದರೆ, 36 ಕ್ಷೇತ್ರಗಳಲ್ಲಿ ಎನ್ಡಿಎ ಮುನ್ನಡೆ ಸಾಧಿಸಿದೆ. ಬಿಜೆಪಿ ಸರ್ಕಾರ ಹಾಗೂ ಕಾಂಗ್ರೇಸ್ ಸರ್ಕಾರಕ್ಕೆ ನಿಕಟ ಪೈಪೋಟಿ ಏರ್ಪಟ್ಟಿದೆ .
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಉತ್ತರಪ್ರದೇಶದಲ್ಲಿ ಆದ ಅಭಿವೃದ್ಧಿ ಕಾರ್ಯಗಳಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಮಲಕ್ಕೆ ಜಯ ನಿಶ್ಚಿತ ಎಂದು ಭಾವಿಸಲಾಗಿತ್ತು. ಆದರೆ ಸಮಾಜವಾದಿ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುತ್ತಿದೆ. ಬಿಜೆಪಿ ಅಧಿಕಾರ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಡೀ ದೇಶವೇ ಕೊಂಡಾಡಿತ್ತು. ಇದೊಂದು ವಿಚಾರ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಸದ್ದು ಮಾಡಿತ್ತು. ರಾಮ ಮಂದಿರ ನಿರ್ಮಾಣದಿಂದಾಗಿ ವಿಶೇಷವಾಗಿ ಉತ್ತರಪ್ರದೇಶದ ಗರಿಮೆ ಉತ್ತುಂಗದಲ್ಲಿತ್ತು. ಇದಕ್ಕೆ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರೇ ಕಾರಣ ಎಂದು ಉತ್ತರ ಪ್ರದೇಶದ ಜನ ಕೊಂಡಾಡಿದ್ದರು.
ಸಾವಿರಾರು ಸಂಖ್ಯೆಯಲ್ಲಿ ಜನ ದೇಶ ವಿದೇಶದಿಂದ ರಾಮ ಮಂದಿರಕ್ಕೆ ಭೇಟಿ ನೀಡಿ ಸಿಎಂ ಯೋಗಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಇದು ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನಗಳ ಅಂತರದಿಂದ ಜಯ ಗಳಿಸಲಿದೆ ಎಂಬುದರ ಸೂಚನೆ ಕೂಡ ಆಗಿತ್ತು. ಆದರೆ ಈವರೆಗಿನ ಫಲಿತಾಂಶ ಬುಡಮೇಲಾಗಿಸಿದೆ.
Post a comment
Log in to write reviews