ಚುನಾವಣಾ ಪ್ರಚಾರಕ್ಕೆ ಬಿಎಂಟಿಸಿ ನೌಕರರ ಬಳಕೆ : ನಿಯಮಗಳನ್ನು ಗಾಳಿಗೆ ತೂರಿದ ಸಾರಿಗೆ ಸಚಿವರು..!
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಮ್ಮ ಅಧೀನದಲ್ಲಿರುವ ಬಿಎಂಟಿಸಿ ನೌಕರರನ್ನ ಪದವಿಧರ ಕ್ಷೇತ್ರದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ರಾಜ್ಯದಲ್ಲಿ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಬಿಫಾರಂ ಪಡೆದ ಅಭ್ಯರ್ಥಿಗಳು ಈಗ ಎಲ್ಲೆಡೆ ಪ್ರಚಾರ ನಡೆಸುತ್ತಿದ್ದಾರೆ.
ಆಯೋಗದ ನಿಯಮದ ಪ್ರಕಾರ ಸರ್ಕಾರಿ ಅಧಿಕಾರಿಗಳನ್ನ, ನೌಕರರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಹಾಗೂ ಚುನಾವಣಾ ಪ್ರಚಾರ ವೇದಿಕೆ ಮೇಲೂ ಅವರು ಕಾಣಿಸಿಕೊಳ್ಳುವಂತಿಲ್ಲ ಎನ್ನುವ ನಿಯಮವಿದೆ. ಆದರೆ, ಈ ಎಲ್ಲ ನಿಯಮಗಳನ್ನ ಗಾಳಿಗೆ ತೂರಿರೋ ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ತಮ್ಮ ಅಧೀನದಲ್ಲಿರುವ ಬಿಎಂಟಿಸಿ ನೌಕರರನ್ನ ಪದವಿಧರ ಕ್ಷೇತ್ರದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಮೇ 9ರಂದು ಪದವೀಧರ ಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಮೋಜಿ ಗೌಡ ಅವರ ಚುನಾವಣಾ ಪ್ರಚಾರ ಬಿಟಿಎಂ ಲೇಔಟ್ ನಲ್ಲಿ ಆಯೋಜಿಸಲಾಗಿತ್ತು. ಪ್ರಚಾರದಲ್ಲಿ ಬಿಎಂಟಿಸಿ ಸಂಚಾರಿ ನಿಯಂತ್ರಕ ಚಿಕ್ಕತಿಮ್ಮಯ್ಯ ಕಾಣಿಸಿಕೊಂಡಿದ್ದಾರೆ. ಅವರು ಸರ್ಕಾರಿ ನೌಕರರಾಗಿದ್ದು, ನಿಯಮದ ಪ್ರಕಾರ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸವಂತಿಲ್ಲ. ಆದರೂ, ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಪರವಾಗಿ ಮತಯಾಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಸಭೆಯನ್ನ ಉದ್ದೇಶಿಸಿ ಸುಧೀರ್ಘ ಭಾಷಣ ಮಾಡಿ ಪಕ್ಷದ ಕಾರ್ಯಕರ್ತರ ರೀತಿ ಮತಯಾಚಿಸಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು, ಇದಕ್ಕೆ ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ಅವರ ಬೆಂಬಲವಿದ್ದು, ಹೀಗಾಗಿಯೇ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿದೆ.
Post a comment
Log in to write reviews